ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಯಡಿಯೂರಪ್ಪ ಚಾಲನೆ

ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಯಡಿಯೂರಪ್ಪ ಚಾಲನೆ

ನಾಡಪ್ರಭು ಕೆಂಪೇಗೌಡರ ಕೊಡುಗೆಯನ್ನು ಚಿರಸ್ಥಾಯಿಯಾಗಿಸಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಥೀಮ್ ಪಾರ್ಕ್ ಯೋಜನೆಗೆ ಶನಿವಾರ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪನವರು ಶಿಲಾನ್ಯಾಸ ನೆರವೇರಿಸಿದರು. ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಂಸದರು, ಆಡಳಿತ ಮತ್ತು ಪ್ರತಿಪಕ್ಷಗಳ ಹಿರಿಯ ನಾಯಕರು ಭಾಗವಹಿಸಿದ್ದರು. ಸುಮಾರು 23 ಎಕರೆ ಪ್ರದೇಶದಲ್ಲಿ ಸುಮಾರು 78 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ಪ್ರತಿಮೆಯನ್ನು ಮುಂದಿನ ವರ್ಷ ಕೆಂಪೇಗೌಡರ 512 ನೇ ಜಯಂತಿಯ ವೇಳೆಗೆ ಅನಾವರಣಗೊಳಿಸುವ ಉದ್ದೇಶವಿದೆ.

Leave a Reply