ಜುಲೈ 5 ರಿಂದ ಭಾನುವಾರದ ಲಾಕ್ಡೌನ್ ಗೆ ಮುಖ್ಯಮಂತ್ರಿಗಳ ನಿರ್ಧಾರ

ಜುಲೈ 5 ರಿಂದ ಭಾನುವಾರದ ಲಾಕ್ಡೌನ್ ಗೆ ಮುಖ್ಯಮಂತ್ರಿಗಳ ನಿರ್ಧಾರ

ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ನಡೆದ ತಜ್ಞರ ಸಭೆಯಲ್ಲಿ ಕೊವಿಡ್ 19 ನಿಯಂತ್ರಣಕ್ಕಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ಬಳಿಕ, ಅಂದರೆ ಜುಲೈ 5 ರಿಂದ ಪ್ರತಿ ಭಾನುವಾರ ಲಾಕ್ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಯಿತು. ಜೊತೆಗೆ ಸರ್ಕಾರಿ ನೌಕರರಿಗೆ ಶನಿವಾರವೂ ರಜೆ ನೀಡಲು, ಕರ್ಫ್ಯೂ ಅವಧಿಯನ್ನು ರಾತ್ರಿ 8 ರಿಂದ ಬೆಳಗ್ಗೆ 5 ರವರೆಗೆ ವಿಸ್ತರಿಸಲು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಪರಿಸ್ಥಿತಿ ಅವಲೋಕಿಸಿ ಒಂದು ತಿಂಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

Leave a Reply