25 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೌಕರರ ಎರಡು ದಿನದ ವೇತನದ ಒಟ್ಟು 1.71 ಕೋಟಿ ರೂ.ಗಳ ಚೆಕ್ಕನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್, ಇಂಜಿನಿಯರಿಂಗ್ ಮುಖ್ಯಸ್ಥ ಕೆಂಪರಾಮಯ್ಯ, ಆರ್ಥಿಕ ಸಲಹೆಗಾರ ಪ್ರಶಾಂತ್ ಮಾಡಾಳ್, ಮುಖ್ಯ ಆಡಳಿತಾಧಿಕಾರಿ ಕೃಷ್ಣೇಗೌಡ ತಾಯಣ್ಣವರ, ನೌಕರರ ಸಂಘದ ಅಧ್ಯಕ್ಷ ರುದ್ರೇಗೌಡ ಉಪಸ್ಥಿತರಿದ್ದರು.