23 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಬೆಂಗಳೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ, ಜಯನಗರ, ಇವರ ವತಿಯಿಂದ 5.47 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಉಪಾಧ್ಯಕ್ಷ ಬಸವರಾಜು, ನಿರ್ದೇಶಕರುಗಳಾದ ಶ್ರೀನಿವಾಸಯ್ಯ ಹಾಗೂ ನರಸಿಂಹಮೂರ್ತಿ ಉಪಸ್ಥಿತರಿದ್ದರು.