ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು : ಸಿಎಂ ಭರವಸೆ

ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು : ಸಿಎಂ ಭರವಸೆ

5 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ತಿಳಿಸಿದರು. ಇಂದು ನಡೆದ ಸಭೆಯಲ್ಲಿ , ರಾಜ್ಯದ ರೈಲ್ವೆ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಗೆ ಸಂಬಂಧಿಸಿದಂತೆ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರು ಮಾಡಿದ ಮನವಿಗೆ, ಮುಖ್ಯಮಂತ್ರಿಗಳು ಕರ್ಮಕೈಗೊಳ್ಳುವ ಭರವಸೆ ನೀಡಿದರು.

ಭೂಮಿಯ ಬೆಲೆ ದುಬಾರಿಯಾಗಿರುವ ಹಿನ್ನಲೆಯಲ್ಲಿ ವೈಟ್ ಫೀಲ್ಡ್ ನಿಂದ ಕೋಲಾರಕ್ಕೆ ರೈಲ್ವೆ ಮಾರ್ಗವನ್ನು ನಿರ್ಮಿಸಲು, ಭೂ ಸ್ವಾಧೀನ ಪ್ರಕ್ರಿಯೆ ತೊಡಕು ಉಂಟಾಗಿದೆ. ಈ ಬಗ್ಗೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ರೈಲ್ವೆ ಇಲಾಖೆಗೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೆ ಮಾರ್ಗಕ್ಕೆ ಆದಷ್ಟು ಶೀಘ್ರದಲ್ಲಿ ಭೂ ಸ್ವಾಧೀನ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಇದಲ್ಲದೆ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ರೈಲ್ವೆ ಯೋಜನೆಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರವನ್ನು ರಾಜ್ಯಸರ್ಕಾರ ನೀಡಲಿದೆ ಎಂದು ಅವರು ತಿಳಿಸಿದರು.

ಹುಬ್ಬಳ್ಳಿ- ಹೊಸಪೇಟೆ, ಹೊಸಪೇಟೆ-ಬಳ್ಳಾರಿ ಹಾಗೂ ಧಾರವಾಡ ಇಲ್ಲಿನ ಕಾಮಗಾರಿಗಳಿಗೆ ವೆಚ್ಚ ಹಂಚಿಕೆ, ಹೊಸ 13 ಯೋಜನೆಗಳಿಗೆ 12780.97 ಎಕರೆ ಅರಣ್ಯೇತರ ಭೂಮಿಯ, ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುವುದು, ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು. ಸಭೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ಬಿ.ವೈ.ರಾಘವೇಂದ್ರ, ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಜರಿದ್ದರು.

Leave a Reply