9 ಸೆಪ್ಟೆಂಬರ್ 2019
ದಾವಣಗೆರೆ ಜಿಲ್ಲೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ ರಾಜುಗೌಡ ಮೊದಲಾದವರು ಉಪಸ್ಥಿತರಿದ್ದರು.
