ಯಡಿಯೂರಪ್ಪನವರಿಗೆ ಜಾಮೀನು ಮಂಜೂರು

ಯಡಿಯೂರಪ್ಪ ಅಭಿಮಾನಿಗಳಿಗೆ ಸಂತಸದ ಸುದ್ದಿ. ಜಮೀನು ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ವಿಚಾರಣಾದೀನ ಕೈದಿಯಾಗಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವಿ. ಪಿಂಟೋ ಜಾಮೀನು ನೀಡಿದ್ದಾರೆ.

ದೂರುದಾರ ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ ಎರಡನೇ ದೂರಿಗೆ ಅವರಿಗೆ ನ.3ರಂದು ಜಾಮೀನು ದೊರೆತಿತ್ತು. ಮೂರನೇ ದೂರಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತ್ತು. ಇಂದು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ಪಿಂಟೋ ಅವರು ವಕೀಲ ಸಿರಾಜಿನ್ ಬಾಷಾ ಪರ ವಕೀಲರ ವಾದವನ್ನು ಆಲಿಸಿದರು. ಆದರೆ ಯಡಿಯೂರಪ್ಪನವರಿಗೆ ಜಾಮೀನು ನೀಡಬಾರದು ಎಂದು ಹೇಳುವ ಆಕ್ಷೇಪದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಒಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಾದ ಕೂಡಲೇ ಅವರನ್ನು ಬಂಧನದಲ್ಲಿಡುವುದು ಸರಿಯಲ್ಲ. ಅಲ್ಲದೇ ಜಾಮೀನು ನಿರಾಕರಿಸುವುದು ಸಮಂಜಸವಾದುದಲ್ಲ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯವ್ಯಕ್ತಪಡಿಸಿ 3ನೇ ದೂರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದರು.

Leave a Reply