ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಸಿಎಂ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಸಿಎಂ

 7 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಹಿರೇಕೆರೂರು ಹಾಗೂ ರೆಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿರ್ಮಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ‌ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಗಾರಿಗೆ ಶಂಕು‌ಸ್ಥಾಪನೆ ಮಾಡಲಾಗಿದೆ‌. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು‌ ಹೇಳಿದರು. ಗೃಹ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.

Leave a Reply