ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

27 ಜನವರಿ 2020
ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮಕೃಷ್ಣ ಹೆಗಡೆ ಹಾಗೂ ಜೆ ಎಚ್ ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು, ಒಬ್ಬ ಸರಳ ಸಜ್ಜನ ರಾಜಕಾರಣಿ ಆಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ..

Leave a Reply