ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ

ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ

23 ಜನವರಿ 2020
ದಾವೊಸ್: ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India” ಎಂಬ ಗೋಷ್ಠಿಯಲ್ಲಿ ಭಾಗವಹಿಸಿ ಗಮನ ಸೆಳೆದರು.

ಸಂವಾದ ಕಾರ್ಯಕ್ರಮದ ಅಂತ್ಯದಲ್ಲಿ ದೇಶದ ಬೆಳವಣಿಗೆಯಲ್ಲಿ ರಾಜ್ಯಗಳ ಪಾತ್ರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಆರ್ಥಿಕ ಚಟುವಟಿಕೆಗಳೂ ರಾಜ್ಯಗಳಲ್ಲಿ ನಡೆಯುವುದರಿಂದ, ದೇಶದ ಆರ್ಥಿಕತೆಯ ಬೆಳವಣಿಗೆಗೆ ರಾಜ್ಯಗಳ ಬೆಳವಣಿಗೆ ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸಲು ರಾಜ್ಯಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದರು.

“ನನ್ನ ರಾಜ್ಯ ಕರ್ನಾಟಕ 250 ಬಿಲಿಯನ್ ಡಾಲರ್ ಜಿಡಿಪಿಯನ್ನು ಹೊಂದಿದ್ದು, ಶೇ. 9ರ ಬೆಳವಣಿಗೆ ದರ ಹೊಂದಿದೆ. ಈ ಸಮಾವೇಶದಲ್ಲಿ ನಾವು ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದೇವೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ” ಎಂದು ತಿಳಿಸಿದರು.

ಹೂಡಿಕೆದಾರರೂ ಸಹ ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಆಶಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಭಿಪ್ರಾಯಪಟ್ಟ ಅವರು, ಸಂವಾದದ ಕುರಿತು ಅಭಿಪ್ರಾಯ ತಿಳಿಸಲು ಅವಕಾಶ ದೊರೆತುದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪಿಯುಷ್ ಗೋಯಲ್ ವಿಷಯ ಮಂಡಿಸಿ, ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply