ಪ್ರವಾಹ ಪರಿಹಾರಕ್ಕೆ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿ ‌ಮನವಿ

ಪ್ರವಾಹ ಪರಿಹಾರಕ್ಕೆ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿ ‌ಮನವಿ

2 ಜನವರಿ 2020
ನೀರಾವರಿಗೆ ಪ್ರತ್ಯೇಕ 50 ಸಾವಿರ ಕೋಟಿ, ಪ್ರವಾಹ ಪರಿಹಾರಕ್ಕೆ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿ ‌ಮನವಿ.ರಾಜ್ಯದ ನೀರಾವರಿ ಯೋಜನೆಗಳಿಗೆ ಪ್ರತ್ಯೇಕವಾಗಿ 50 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು. ತುಮಕೂರಿನಲ್ಲಿ ನಡೆದ ರೈತ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹದಿಂದ ದೊಡ್ಡ ಮಟ್ಟದ ಹಾನಿಯಾಗಿದ್ದು, ಪರಿಹಾರ ಕಾರ್ಯಕ್ಕಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆಯೂ ಇದೇ ಸಂದರ್ಭದಲ್ಲಿ ಪ್ರಧಾನಿಯವರಿಗೆ ಮನವಿ ಮಾಡಿದರು.

Leave a Reply