ಶ್ರೀ ಗಳ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಹಾಗೂ ವಿವಿಧ ಗ್ರಾಮಾಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ ಸಿಎಂ

8 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಹುಟ್ಟೂರಾದ, ಮಾಗಡಿ ತಾಲ್ಲೂಕಿನ ವೀರಾಪುರದಲ್ಲಿ ಶ್ರೀ ಗಳ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಹಾಗೂ ವಿವಿಧ ಗ್ರಾಮಾಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾಯಣ, ಶಾಸಕರುಗಳಾದ ಎ. ಮಂಜುನಾಥ, ಶ್ರೀನಿವಾಸ ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ. ರೇವಣ್ಣ, ಅ. ದೇವೆಗೌಡ, ಸಂಸದರಾದ ಡಿ.ಕೆ. ಸುರೇಶ್, ಜಿ.ಎಸ್. ಬಸವರಾಜ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳ ತಂದೆ-ತಾಯಿಯ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.