ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

2 ನವೆಂಬರ್ 2019
ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯ ಮುಖಾಂತರ ವಿಶೇಷ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಈ ಭಾಗದ ಅಭಿವೃದ್ಧಿಯ ಕುರಿತ ಅವರು ತೋರಿದ ಕಾಳಜಿ ಅನನ್ಯವಾದುದು. ಶಾಸಕರಾಗಿ ಹಾಗೂ ತೋಟಗಾರಿಕೆ, ನಗರಾಭಿವೃದ್ಧಿ ಸಚಿವರಾಗಿ ಅವರ ಕೊಡುಗೆಯೂ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ನಿಧನದಿಂದ ಒಬ್ಬ ನೇರ ನಡೆ, ನುಡಿಯ ಹೋರಾಟಗಾರ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದಿರುವ ಮುಖ್ಯಮಂತ್ರಿಗಳು, ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Leave a Reply