ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಸಿಎಂ

ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಸಿಎಂ

18 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಂದ ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ

ಹುಬ್ಬಳ್ಳಿ: ನವಲಗುಂದ ಹಾಗೂ ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದ್ದು, ಈ ಕಾಮಗಾರಿಗಳಿಗೆ ಇಂದು‌ ಶಂಕು ಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಹೇಳಿದರು.ಧಾರವಾಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂ ಪೂಜೆ ನೆರವೇರಿಸುವ ಸಲುವಾಗಿ, ಬೆಂಗಳೂರಿನಿಂದ ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಯೋಜನೆಗಳನ್ನು ಶೀಘ್ರವಾಗಿ ಮುಗಿಸುವ ಮೂಲಕರೈತನ ಒಳಿತಿಗಾಗಿ ಶ್ರಮಿಸಲಾಗುತ್ತಿದೆ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಉಪ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ 12 ಸ್ಥಾನಗಳಲ್ಲಿ ಗೆಲುವು ದೊರೆತಿರುವುದು, ಯಾವುದೇ ಅಡ್ಡಿ ಆತಂಕ ಇಲ್ಲದೆ ಮೂರೂವರೆ ವರ್ಷ ಆಡಳಿತ ನೀಡಲು ಅವಕಾಶ ಕಲ್ಪಿಸಿದೆ.ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಬದಲಾವಣೆ ಮಾಡಲಿದ್ದೇವೆ. ಡಿಸೆಂಬರ್ ಅಂತ್ಯದಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಪ್ರಧಾನಿಗಳ ಜತೆ ಚರ್ಚಿಸಿದ ನಂತರ, ಪಕ್ಷವನ್ನು ಬೆಂಬಲಿಸಿ ಚುನಾವಣೆಯಲ್ಲಿ ವಿಜೇತರಾದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು.

ಪ್ರಧಾನ ಮಂತ್ರಿಗಳು ಜನವರಿ 2 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ 3 ರಂದು ಬೃಹತ್ ಸಮಾವೇಶ ಏರ್ಪಡಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯದೊಂದಿಗೆ ಚರ್ಚೆ ನಡೆಸಲಾಗುತ್ತಿದೆ.ಮಹಾದಾಯಿ ಹೋರಾಟ ಬಹುದಿನಗಳದ್ದು, ಗೋವಾ ಹಾಗೂ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಆದಷ್ಟೂ ಬೇಗ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದರು.ಉಪ ಮುಖ್ಯ ಮಂತ್ರಿ , ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಎಂ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ ಸಿ ಪಾಟೀಲ್ ಉಪಸ್ಥಿತರಿದ್ದರು.

Leave a Reply