347 ಕೋಟಿ ರೂ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

347 ಕೋಟಿ ರೂ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

8 ಡಿಸೆಂಬರ್ 2019
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸುಮಾರು 347 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಒಡಿಯೂರು ಎಂಬಲ್ಲಿ ಶನಿವಾರ ಗುಡ್ಡ ಕುಸಿದು ಸಾವನ್ನಪ್ಪಿದವರಿಗೆ ತಲಾ ಮೂರು ಲಕ್ಷ‌ ಪರಿಹಾರ ಮಂಜೂರು ಮಾಡಲಾಗುವುದು.ಬೆಳ್ತಂಗಡಿ ತಾಲೂಕಿನ ಕಣಿಯೂರು ನಲ್ಲಿ ಹೋಬಳಿ ಕೇಂದ್ರ ಸ್ಥಾಪಿಸಲಾಗುವುದು.‌ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಿದರು.

Leave a Reply