11 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸರಕು ಮತ್ತು ಸೇವಾ ತೆರಿಗೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶೀಲನಾ ಸಭೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿ ನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.