ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ

ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ

31 ಜನವರಿ 2019
ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಾನ್ಯ ಪ್ರಧಾನಮಂತ್ರಿಗಳು ಗುರುವಾರ ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಮಾರಂಭದ ಸ್ಥಳ ಪರಿಶೀಲನೆ ನಡೆಸಿದರು. ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮೀಜಿ, ವಸತಿ ಸಚಿವ ವಿ ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

Leave a Reply