9 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ, ಅಮರ ಸುಳ್ಯ ವಿಪ್ಲವ 1837ರ ಕುರಿತ ವಿಚಾರ ಸಂಕೀರ್ಣವನ್ನು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.
