ಕರ್ಟನ್ ರೈಸರ್ ಕಾರ್ಯಕ್ರಮ ಉದ್ಘಾಟಿಸಿದ  ಸಿಎಂ

ಕರ್ಟನ್ ರೈಸರ್ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

23 ಜನವರಿ 2020
ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಸಂದರ್ಭದಲ್ಲಿ ಏರ್ಪಡಿಸಿದ್ದ, ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಕರ್ಟನ್ ರೈಸರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು.

* ಮುಂದಿನ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ವೃದ್ಧಿ ಮತ್ತು ಅಭಿವೃದ್ಧಿಯ ಶಕ್ತಿ ಕೇಂದ್ರವಾಗಿ ರೂಪಿಸಲಾಗುವುದು.

* ಬೆಂಗಳೂರಿನಲ್ಲಿ ನವೆಂಬರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಉದ್ಯಮಿಗಳು ಹಾಗೂ ಹೂಡಿಕೆದಾರರಲ್ಲಿ ಮನವಿ.

* ಕರ್ನಾಟಕವು ಇನ್ಫೋಸಿಸ್, ಬಯೋಕಾನ್, ವಿಪ್ರೊ ಮತ್ತು ಡೈನಮ್ಯಾಟಿಕ್ಸ್ ನಂತಹ ಭಾರತೀಯ ಮೂಲದ ಬಹುರಾಷ್ಟ್ರೀಯ ಕಂಪೆನಿಗಳ ನೆಲೆಯಾಗಿದ್ದು, ಉತ್ತಮ ಬೆಳವಣಿಗೆ ದರವನ್ನು ಹಿಂದಿನಿಂದಲೂ ದಾಖಲಿಸುತ್ತ ಬಂದಿದ್ದು, ಇದು ರಾಷ್ಟ್ರೀಯ ಬೆಳವಣಿಗೆ ದರಕ್ಕಿಂದ ಹೆಚ್ಚಾಗಿದೆ. ಜೊತೆಗೆ ರಾಜ್ಯದ ನಿರುದ್ಯೋಗ ಪ್ರಮಾಣವೂ ಅತಿ ಕಡಿಮೆ ಇದೆ.

* ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ವಹಿವಾಟಿಗೆ ಇರುವ ತೊಡಕುಗಳನ್ನು ನಿವಾರಿಸುತ್ತಾ ಹೂಡಿಕೆಗೆ ಉತ್ತಮ ವಾತಾವರಣ ಸೃಷ್ಟಿಸಲು ನೆರವಾಗುತ್ತಿದೆ.

* ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾರಿಕಾ ಅಭಿವೃದ್ಧಿ ಮೂಲಕ 21ನೇ ಶತಮಾನದಲ್ಲಿ ನವ ಭಾರತ ನಿರ್ಮಾಣ ಮಾಡಲು ನಮ್ಮನ್ನು ಸದಾ ಹುರಿದುಂಬಿಸುತ್ತಿದ್ದಾರೆ. ಕೈಗಾರಿಕೆಗಳ ಆಶಾದಾಯಕ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಉತ್ಪಾದಕತೆ, ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯಲ್ಲಿನ ಹೂಡಿಕೆಗೆ ಉತ್ತೇಜನ ನೀಡುವ ಹೊಸ ಕೈಗಾರಿಕಾ ನೀತಿಯನ್ನು ರೂಪಿಸುತ್ತಿದ್ದೇವೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

* ಬೆಂಗಳೂರಿನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಫೆಬ್ರುವರಿಯಲ್ಲಿ ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ.

* ರಾಜ್ಯದಲ್ಲಿ ಸುಸ್ಥಿರ ಉತ್ಪಾದನಾ ವಲಯ ಸೃಷ್ಟಿಸುವ ಮಹತ್ವಾಕಾಂಕ್ಷೆಯೊಂದಿಗೆ ಎರಡು ಹಾಗೂ ಮೂರನೇ ಹಂತದ ನಗರಗಳಿಗೆ ಸಂಪರ್ಕವನ್ನು ಸುಧಾರಿಸಲಾಗಿದೆ, ಭೂ ಬ್ಯಾಂಕ್ ಸೃಷ್ಟಿಸಲಾಗಿದೆ. ಆ ಮೂಲಕ ಕರ್ನಾಟಕದ ಬೆಳವಣಿಯ ವೇಗ ಹೆಚ್ಚಿಸಲು ಉದ್ದೇಶಿಸಲಾಗಿದೆ.

* ಕೈಗಾರಿಕೆಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯವು ಉತ್ಪನ್ನ ಆಧಾರಿತ ಕೈಗಾರಿಕಾ ಕ್ಲಸ್ಟರುಗಳ ಅಭಿವೃದ್ಧಿಗೆ ಕ್ರಮ ವಹಿಸುತ್ತಿದ್ದು, ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್

* ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ, ಆ ಮೂಲಕ ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯಾಗಿ ರೂಪಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸನ್ನು ನನಸಾಗಿಸುವಂತೆ ಉದ್ಯಮಿಗಳಿಗೆ ಮನವಿ.

* “ನೀವು ನಿಮ್ಮ ಉದ್ಯಮವನ್ನು ಭಾರತದ ಎಲ್ಲ ಭಾಗಗಳಲ್ಲಿ ವಿಸ್ತರಿಸಿ, ವಿಶೇಷವಾಗಿ ಕೈಗಾರಿಕೆಗಳಿಗೆ ಪೂರಕ ವಾತಾವರಣವಿರುವ ಕರ್ನಾಟಕದಲ್ಲಿ” ಎಂದು ಮನವಿ.

ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್

* ಈ ಕರ್ಟನ್ ರೈಸರ್ ಕಾರ್ಯಕ್ರಮದಿಂದ ಹೂಡಿಕೆದಾರರು, ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತು ಸಿದ್ಧತೆ ನಡೆಸಿಕೊಂಡು, ಸಮಾವೇಶದಲ್ಲಿ ಪಾಲ್ಗೊಳ್ಳಲು ಅನುಕೂಲವಾಗಲಿದೆ.

Leave a Reply