ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ

15 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ನಟರಾಜು ಬೂದಾಳು ಹಾಗೂ ಬಿ.ಎಸ್. ಮೂರ್ತಿ ಅವರಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿ, ಕನಕದಾಸರ ಕುರಿತ 8 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕಾಗಿನೆಲೆ ಮಹಾಸಂಸ್ಥಾನದ ತಿಂತಿಣಿ ಬ್ರಿಡ್ಜ್ ಶಾಖಾಮಠದ ಶ್ರೀಸಿದ್ದರಾಮಾನಂದಪುರಿ ಸ್ವಾಮಿಗಳು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಸಿ.ಟಿ. ರವಿ ಉಪಸ್ಥಿತರಿದ್ದರು.

Leave a Reply