20 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸ್ವಿಟ್ಜರ್ಲ್ಯಾಂಡ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ‘ಕರ್ನಾಟಕ ಪೆವಿಲಿಯನ್’ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಫೋರಮ್ ನ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸ್ಯಾನ್ ಮೆಝ್ ಅವರೊಂದಿಗೆ ರಾಜ್ಯದಲ್ಲಿ ‘ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್’ ಅನ್ನು ಪ್ರಾರಂಭಿಸುವ ಕುರಿತು ಚರ್ಚಿಸಲಾಯಿತು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಐಟಿ ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್ ಸೆಲ್ವ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.