ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಉದ್ಘಾಟಿಸಿದ ಸಿಎಂ

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಉದ್ಘಾಟಿಸಿದ ಸಿಎಂ

23 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಉದ್ಘಾಟಿಸಿ ರಾಣಿ ಚನ್ನಮ್ಮನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿ ಅವರು ಮಾಜಿ ಸಚಿವೆ ಹಾಗೂ ಅಕ್ಕಮಹಾದೇವಿ ಟ್ರಸ್ಟ್ ನ ಅಧ್ಯಕ್ಷೆ ಲೀಲಾದೇವಿ.ಆರ್. ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಆರ್.ಆರ್. ಜನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಉಪಸ್ಥಿತರಿದ್ದರು.

Leave a Reply