22 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬ್ಯಾಂಕ್ ಆಫ್ ಬರೋಡಾ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ವಲಯದ “ಮೆಗಾ ಕಿಸಾನ್ ಮೇಳ”ವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಜನರಲ್ ಮ್ಯಾನೇಜರ್ ಎಸ್.ಎ. ಸುದರ್ಶನ್ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಾ: ಸಿ.ಎನ್.ಅಶ್ವಥ್ ನಾರಾಯಣ್,ಶಾಸಕ ಅರವಿಂದ ಲಿಂಬಾವಳಿ, ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಉಪಸ್ಥಿತರಿದ್ದರು.