ಭಯೋತ್ಪಾದಕ ನಿಗ್ರಹ ದಳದ ಉದ್ಘಾಟನೆ ಮಾಡಿದ ಸಿಎಂ

ಭಯೋತ್ಪಾದಕ ನಿಗ್ರಹ ದಳದ ಉದ್ಘಾಟನೆ ಮಾಡಿದ ಸಿಎಂ

17 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಸಿಇಎನ್ ಪೊಲೀಸ್ ಠಾಣೆಗಳ ಮತ್ತು ಭಯೋತ್ಪಾದಕ ನಿಗ್ರಹ ದಳದ ಉದ್ಘಾಟನೆ ನೆರವೇರಿಸಿದರು. ಮುಖ್ಯಮಂತ್ರಿಗಳು, ಇದೇ ಸಂದರ್ಭದಲ್ಲಿ 88 ಹೆದ್ದಾರಿ ಸಂಚಾರಿ ಗಸ್ತು ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ರಿಜ್ವಾನ್ ಅರ್ಷದ್, ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

Leave a Reply