27 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಉಪಮುಖ್ಯಮಂತ್ರಿ ಡಾ. ಸಿ ಎಸ್ ಅಶ್ವತ್ಥ್ ನಾರಾಯಣ್, ವಸತಿ ಸಚಿವ ವಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ ಜಿ ಬೋಪಯ್ಯ, ಎಂ ಪಿ ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ ಉಪಸ್ಥಿತರಿದ್ದರು.
