ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಿಎಂ

2 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಅಶೋಕ್ ಹಾಗು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.