26 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸುತ್ತೂರಿನಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಂಸದೆ ಶೋಭಾ ಕರಂದ್ಲಾಜೆ, ವಸತಿ ಸಚಿವ ವಿ ಸೋಮಣ್ಣ, ಶಾಸಕ ಯತೀಂದ್ರ, ಬಿ ವೈ ವಿಜಯೇಂದ್ರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
