ವೀರಶೈವ ಮಹಾಕುಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

ವೀರಶೈವ ಮಹಾಕುಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ

16 ಫೆಬ್ರುವರಿ 2020
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ವಾರಾಣಸಿಯ ಜಂಗಮವಾಡಿ ಮಠದ ಕಾಶಿ ಜಗದ್ಗುರು ಪೀಠ ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಸಮಾರಂಭ ಹಾಗೂ ವೀರಶೈವ ಮಹಾಕುಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಯವರು, ವಿವಿಧ ಭಾಷೆಗಳಿಗೆ ಭಾಷಾಂತರಗೊಂಡಿರುವ ಸಿದ್ಧಾಂತ ಶಿಖಾಮಣಿ ಪುಸ್ತಕ ಮತ್ತು ಆ್ಯಪ್ ಅನ್ನು ಬಿಡುಗಡೆ ಮಾಡಿದರು. ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉಪಸ್ಥಿತರಿದ್ದರು.

Leave a Reply