8 ಅಕ್ಟೋಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಜಯದಶಮಿ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಉಪ ಮುಖ್ಯಮಂತ್ರಿ ಗೋವಿಂದ.ಎಂ. ಕಾರಜೋಳ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಅಬಕಾರಿ ಸಚಿವ ಎಚ್. ನಾಗೇಶ್ ಉಪಸ್ಥಿತರಿದ್ದರು.