21 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದ ಕರ್ನಾಟಕ ಪೆವಿಲಿಯನ್ ನಲ್ಲಿ ವೋಲ್ವೋ ಕಂಪೆನಿ ಅಧ್ಯಕ್ಷ ಹಂಕಾ ಅಂಗ್ವೆಲ್ ಅವರೊಂದಿಗೆ ಮಾತುಕತೆ ನಡೆಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.
