14 ಸೆಪ್ಟೆಂಬರ್ 2019
ವಸತಿ ಸಚಿವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷರಾದ ವಿ. ಸೋಮಣ್ಣ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮೈಸೂರು ದಸರಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ, ಶಾಸಕರುಗಳಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಹರ್ಷವರ್ಧನ್, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಉಪಸ್ಥಿತರಿದ್ದರು.