ದೇವನಹಳ್ಳಿಯಲ್ಲಿ ಶಕ್ತಿ ಕೇಂದ್ರ ಪ್ರಮುಖರ ಸಭೆ

ದೇವನಹಳ್ಳಿಯಲ್ಲಿ ಶಕ್ತಿ ಕೇಂದ್ರ ಪ್ರಮುಖರ ಸಭೆ

ಇಂದು ದೇವನಹಳ್ಳಿಯಲ್ಲಿ ನಡೆದ ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾನ್ಯ ಯಡಿಯೂರಪ್ಪನವರು ಪಾಲ್ಗೊಂಡರು. ಪಕ್ಷದ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಅಲ್ಲದೆ, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ-ಮನೆಗೂ ತಲುಪಿಸುವ ಕಾರ್ಯ ಮಾಡಬೇಕೆಂದು ಸೂಚಿಸಿದರು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply