ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚೆ

ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚೆ

9 ಸೆಪ್ಟೆಂಬರ್ 2019
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು:

ಶಿವಮೊಗ್ಗ ಔಟರ್ ರಿಂಗ್ ರಸ್ತೆ ಸಮೀಪ ರಸ್ತೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಜಾಗ ನೀಡಲು ಒಪ್ಪಿಗೆ

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಆರಂಭಿಕ ಕೆಲಸಕ್ಕೆ ಒಪ್ಪಿಗೆ

ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲು ಸಂಚಾರ ಚೆನ್ನೈವರೆಗೆ ವಿಸ್ತರಣೆಗೆ ತಾತ್ವಿಕ ಒಪ್ಪಿಗೆ

ಶಿವಮೊಗ್ಗ – ತಿರುಪತಿ ರೈಲು ಬೀರೂರು, ಚಿತ್ರದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲು ತಾತ್ವಿಕ ಒಪ್ಪಿಗೆ

ಶಿವಮೊಗ್ಗ ಮತ್ರು ಯಶವಂತಪುರ ನಡುವೆ ಸಂಚಾರ ಮಾಡುವ ಶತಾಬ್ದಿ ರೈಲಿನ ಸಮಯ ಬದಲಾವಣೆ ಕುರಿತು ಚರ್ಚಿಸಲಾಯಿತು.

ಬೀರೂರು – ಶಿವಮೊಗ್ಗ ರೈಲು ಮಾರ್ಗದ ಡಬ್ಲಿಂಗ್ ಕಾಮಗಾರಿ ಸಧ್ಯದಲ್ಲೇ ಆರಂಭಿಸಲು ಸೂಚನೆ

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಬಗ್ಗೆ ಚರ್ಚೆ ನಡೆಸಲಾಯಿತು

ಮೆಟ್ರೋ ಕಾಮಗಾರಿಗಳಿಗೆ ರೈಲ್ವೆ ಇಲಾಖೆಯು ಸಹಕರಿಸುವಂತೆ ಮನವಿ ಮಾಡಲಾಯಿತು.

Leave a Reply