ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸಂತ್ರಸ್ತರಿಗೆ ಪರಿಹಾರ ವಿತರಣೆ

10 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ವಿತರಿಸಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರ ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಜೊತೆಗಿದ್ದರು.