ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

11 ನವೆಂಬರ್ 2019
ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೇಷನ್ ಅವರು, ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ ದಿಟ್ಟ ವ್ಯಕ್ತಿ . ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಅವರು ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧುವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply