ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ

ಇಂದು ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಮುಖಂಡರೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು. ಮಾನ್ಯ ಯಡಿಯೂರಪ್ಪನವರು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಕಸದ ಬುಟ್ಟಿ ಬಳಸುವುದು ಹಾಗೂ ಕಸ ವಿಂಗಡಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಲಾಯಿತು.