28 ಅಕ್ಟೋಬರ್ 2019
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಮಂಡಳಿಯ ಅಧ್ಯಕ್ಷ ಡಿ.ಆರ್. ಜಯರಾಜ್, ಮಾಜಿ ಅಧ್ಯಕ್ಷರಾದ ಎ. ಚಿನ್ನೇಗೌಡ, ಸಾ.ರಾ. ಗೋವಿಂದ್, ಕಾರ್ಯದರ್ಶಿ ಎನ್.ಎಂ. ಸುರೇಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಉಪಸ್ಥಿತರಿದ್ದರು.