ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆ

ಇಂದು ಕಲಬುರಗಿ ಜಿಲ್ಲೆ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆ ಯಶಸ್ವಿಯಾಗಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ, ಜನಪರ ಆಡಳಿತ ನಡೆಸುತ್ತಿದೆ. ಮೋದಿ ಅವರನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ಕಾರ್ಯಕರ್ತರು ಜನರಿಗೆ ಕೇಂದ್ರ ಸರಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ಮಾನ್ಯ ಯಡಿಯೂರಪ್ಪನವರು ತಿಳಿಸಿದರು. ಜಿಲ್ಲೆಯ ಮುಖಂಡರು, ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.