ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರೊ.ಜಿ.ಎಸ್. ಜಯದೇವ ಅವರಿಗೆ ಪ್ರದಾನ ಮಾಡಿದ ಸಿಎಂ

2 ಅಕ್ಟೋಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಕರ್ನಾಟಕ-2019ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರೊ.ಜಿ.ಎಸ್. ಜಯದೇವ ಅವರಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾ. ಭೀಮನಗೌಡ ಸಂಗನ ಗೌಡ ಪಾಟೀಲ್, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ. ಪಿ. ಕೃಷ್ಣ, ವಾರ್ತಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹಾಗೂ ಆಯುಕ್ತ ಸಿದ್ದರಾಮಪ್ಪ ಉಪಸ್ಥಿತರಿದ್ದರು.