ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನಾ ಸಮಾರಂಭ

ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನಾ ಸಮಾರಂಭ

9 ಸೆಪ್ಟೆಂಬರ್ 2019
ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ಉಚ್ಛ ನ್ಯಾಯಾಲಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಮಹಾನಗರ ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನೆ ಹಾಗೂ ಕಟ್ಟಡದ ಎರಡನೇ ಹಂತದ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೋಹನ ಎಂ ಶಾಂತನಗೌಡರ್, ಎಸ್. ಅಬ್ದುಲ್ ನಜೀರ್ ಮತ್ತು ಎ. ಎಸ್. ಬೋಪಣ್ಣ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು, ಸಂಸದೀಯ ವ್ಯವಹಾರ ಸಚಿವರಾದ ಜೆ. ಸಿ. ಮಾಧುಸ್ವಾಮಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಸಿಎಂಎಂ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಉಪಸ್ಥಿತರಿದ್ದರು.

Leave a Reply