ಸ್ವಸ್ಥ ಸಮಾಜ ನಿರ್ಮಾಣಕ್ಕೆ “ಪೋಷಣ್ ಅಭಿಯಾನ” ಸಹಕಾರಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಸ್ವಸ್ಥ ಸಮಾಜ ನಿರ್ಮಾಣಕ್ಕೆ “ಪೋಷಣ್ ಅಭಿಯಾನ” ಸಹಕಾರಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ

13 ಸೆಪ್ಟೆಂಬರ್ 2019

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜವಳಿ ಖಾತೆ ಸಚಿವೆ ಶ್ರೀಮತಿ ಸ್ಮೃತಿ ಇರಾನಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕೇಂದ್ರ ಸರ್ಕಾರದ “ಪೋಷಣ್ ಅಭಿಯಾನ” ಯೋಜನೆ ಪ್ರಗತಿ ಬಗ್ಗೆ ಚರ್ಚಿಸಿದರು.

ರಾಜ್ಯದಲ್ಲಿ ತಾಯಿ ಮತ್ತು ಶಿಶು ಆರೋಗ್ಯ ವೃದ್ಧಿಸುವ ಮೂಲಕ ಶಿಶು ಮರಣ ಪ್ರಮಾಣ ಹಾಗೂ ಗರ್ಭಿಣಿ ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವುದಲ್ಲದೇ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಕೊಡುಗೆ ನೀಡಲು “ಪೋಷಣ್ ಅಭಿಯಾನ” ಯೋಜನೆ ಸಹಕಾರಿಯಾಗಿದೆ. ಆದ್ದರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಒಗ್ಗೂಡಿ ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೇಂದ್ರ ಸಚಿವರು ಮನವಿ ಮಾಡಿದರು.

ಕರ್ನಾಟಕದಲ್ಲಿ ಪ್ರತಿ 1000 ಶಿಶುಗಳಿಗೆ ಮರಣವನ್ನಪ್ಪುವ ಪ್ರಮಾಣ 50 ರಿಂದ 25 ಕ್ಕೆ ಇಳಿದಿದೆ. ಇದನ್ನು ಮತ್ತಷ್ಟು ಸುಧಾರಿಸುವತ್ತ ಕ್ರಮ ಕೈಗೊಳ್ಳಬೇಕಾಗಿದ್ದು, ತಾಯಿ ಮತ್ತು ಶಿಶುಗಳ ಆರೋಗ್ಯ ಸುಧಾರಣೆಗೆ ಪೂರಕವಾದ “ಪೋಷಣ್ ಅಭಿಯಾನ” , “ಮಾತೃ ಪೂರ್ಣ” ಮೊದಲಾದ ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಎಲ್ಲ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Leave a Reply