30 ಸೆಪ್ಟೆಂಬರ್ 2019
ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಬಜೆಟ್ನಲ್ಲಿ ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದ ಬಹುತೇಕ ಎಲ್ಲ ಜಲಾಶಯಗಳು ತುಂಬಿದ್ದು ಇದರ ಗರಿಷ್ಠ ಸದುಪಯೋಗವನ್ನು ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.