30 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆಯ ಅಂಗವಾಗಿ ವಿಧಾನ ಸೌಧ ಹಾಗೂ ವಿಕಾಸ ಸೌಧದ ನಡುವೆ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅರಣ್ಯ ಸಚಿವ ಸಿ ಸಿ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
