‘ಸ್ನೇಹ ಮಿಲನ’ ಕಾರ್ಯಕ್ರಮ

ಇಂದು ಮಾನ್ಯ ಯಡಿಯೂರಪ್ಪನವರು ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರೊಂದಿಗೆ ಹಮ್ಮಿಕೊಂಡಿದ್ದ ‘ಸ್ನೇಹ ಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕ್ಷೇತ್ರದ ಅಭ್ಯರ್ಥಿಯಾದ ಬಿ.ವೈ.ರಾಘವೇಂದ್ರ ಅವರು ಜನಪರ ಕಾಳಜಿ ಉಳ್ಳವರಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕೇಂದ್ರ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಜನರ ಕಲ್ಯಾಣಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಬೆಂಬಲಿಸಿ ಗೆಲ್ಲಿಸಿ. ನವಭಾರತ ನಿರ್ಮಾಣಕ್ಕಾಗಿ ಮೋದಿ ಜೀ ಅವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಕೈಜೋಡಿಸಿ ಎಂದು ತಿಳಿಸಲಾಯಿತು. ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.