ಈ ಬಾರಿ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ

ಈ ಬಾರಿ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ

19 ಸೆಪ್ಟೆಂಬರ್ 2019
ಈ ಬಾರಿ ಬೆಳಗಾವಿಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಸುಮಾರು 872 ಗ್ರಾಮಗಳು ಬಾಧಿತಗೊಂಡಿದ್ದು 4.15 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಇದಲ್ಲದೆ 70 ಸಾವಿರಕ್ಕಿಂತಲೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದ್ದು ಸಾರ್ವಜನಿಕರಿಗೆ ಸಾಕಷ್ಟು ಅನಾನುಕೂಲತೆಯಾಗಿದೆ. ಹಾಗಾಗಿ ಪ್ರತಿ ಬಾರಿಯಂತೆ ಈ ಬಾರಿಯು ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದಲ್ಲಿ ಸಂಕಷ್ಟಕ್ಕೆ ಈಡಾದ ಸಾರ್ವಜನಿಕರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿರುವ ವಿಭಾಗ ಮಟ್ಟದ ಎಲ್ಲಾ ಅಧಿಕಾರಿಗಳು ಅಧಿವೇಶನದ ಪೂರಕ ಕೆಲಸ ಕಾರ್ಯಗಳಲ್ಲಿ ತೊಡಗುವುದರಿಂದ ಸಂಕಷ್ಟಕ್ಕೆ ಈಡಾದ ಜನರಿಗೆ ಪರಿಹಾರ ಕಾರ್ಯಾಚರಣೆಗಳಿಗೆ ಅಡಚಣೆ ಉಂಟಾಗುವ ಸಂಭವವಿರುತ್ತದೆ. ಆದುದರಿಂದ ಸ್ಥಳೀಯ ಅಧಿಕಾರಿಗಳ ವರದಿ ಆಧಾರದ ಮೇಲೆ ಮತ್ತು ಅತಿವೃಷ್ಠಿಗೆ ಒಳಗಾದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

Leave a Reply